ಕದಂಬರು
- ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು .
- ಕದಂಬರು ಆಳಿದ್ದ ಕ್ರಿ.ಶ.4 ನೇ ಶತಮಾನದಿಂದ 6 ನೇ ಶತಮಾನದವರೆಗೆ
- ಕದಂಬರ ರಾಜಧಾನಿ - ಬನವಾಸಿ .
- ಬನವಾಸಿ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ .
- ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ .
- ಕದಂಬರ ಲಾಂಛನ - ಸಿಂಹ .
- ಕದಂಬರ ಧ್ವಜ - ವಾನರ .
- ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ .
- ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ .
- ದೈವಾಂಶ ಸಿದ್ದಾಂತ
- ನಾಗ ಸಿದ್ದಾಂತ
- ಜೈನ ಸಿದ್ದಾಂತ
- ನಂದಾ ಮೂಲ
- ತಮಿಳು ಮೂಲ
- ಕನ್ನಡ ಮೂಲ
- ಕದಂಬರ ಮೂಲ ಪುರುಷ - ಮಯೂರ ವರ್ಮ .
- ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
- ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
- ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
- ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
- ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
- ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
- ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
- ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
- ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
- ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
- ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
- ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
- ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು .
- ಪ್ರಧಾನ ಮಂತ್ರಿ - ಪ್ರಧಾನ
- ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
- ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
- ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
- ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
- ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
- ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ .
- ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ .
- ವ್ಯಾಪಾರ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ .
- ಸಾರಿಗೆ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ .
- ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು .
- ಕದಂಬರ ಕೂಟ ಯುದ್ದವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ .
- ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ .
- ಕದಂಬ ಸಾಮ್ರಾಜ್ಯವು ಈ ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ .
- ಕದಂಬರು ಈ ಧರ್ಮದ ಅವಲಂಬಿಗಳು - ವೈದಿಕ ಧರ್ಮ .
- ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ .
- ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ .
- ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ .
- ಕದಂಬರ ಮುಖ್ಯ ವೃತ್ತಿ - ವ್ಯವಸಾಯ .
- ಕದಂಬರ ಕಾಲದ ಭ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ.
- ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ
- ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ .
- ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ .
- ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ ,
- ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ ,
- “ ಘಟಿಕ ಸಾಹಸಿ ” ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ .
- ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ .
- ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ .
- ಕದಂಬರ ಆರಂಭದ ಶಾಸನಗಳು ಈ ಭಾಷೆಯಲ್ಲಿದೆ - ಪ್ರಾಕೃತ .
- ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ )
- “ ಮದನ ತಿಲಕ ” ಕೃತಿಯ ಕರ್ತೃ - ಚಂದ್ರರಾಜ .
- ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ .
- “ ಸುಕುಮಾರ ಚರಿತೆ ” ಯ ಕರ್ತೃ - ಶಾಂತಿನಾಥ
- “ ಕೌಂತಳೇಶ್ವರ ದೌತ್ಯಂ ” ಕೃತಿಯ ಕರ್ತೃ - ಎರಡನೇ ಕಾಳಿದಾಸ .
- “ ಕದಂಬ ಶೈಲಿ ” ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು .
- ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ .
- ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ .
- ಹಲ್ಮಿಡಿ ಶಾಸನ ಈ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ .
- ಮಯೂರ ವರ್ಮನನ್ನು “ ದ್ವೀಜೋತಮ ” ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ .
- ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ
- “ಧರ್ಮ ಮಹಾರಾಜಾಧಿರಾಜ ” ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ .
- ತಾಳಗುಂದ ಶಾಸನ ಈ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ .
- ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ .
- ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ .
- ಕದಂಬರ ಪ್ರಾಂತ್ಯದ ಘಟಕಗಳು - ಕಂಪಣ .
- ಟಂಕ ಹಾಗೂ ಗಧ್ಯಾಣ ಎಂಬ ನಾಣ್ಯಗಳನ್ನು ಚಲಾವಣಿಗೆ ತಂದ ಮೊದಲಿಗರು - ಕದಂಬರು .
- ಚಂದ್ರವಳ್ಳಿಯ ಶಾಸನ ಈ ಜಿಲ್ಲೆಯಲ್ಲಿ ದೊರೆತಿದೆ - ಚಿತ್ರದುರ್ಗ .
- ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ .
- ಮಹಾಭಾರತದಲ್ಲಿ ಬನವಾಸಿಯನ್ನು ಈ ಹೆಸರಿನಿಂದಲೂ ಕರೆದ್ದಿದ್ದಾರೆ - ಕುಂತಲ ದೇಶ .
- ಪ್ರಣವೇಶ್ವರನ ಹೆಸರಿನಲ್ಲಿ ಕೆರೆಯನ್ನ ಕಟ್ಟಿಸಿದ ದೊರೆ - ಕಾಕುಸ್ಥವರ್ಮ .
- ಕದಂಬರು ಈ ನದಿಯ ದಡದಲ್ಲಿ ತಮ್ಮ ರಾಜ್ಯವನ್ನ ಸ್ಥಾಪಿಸಿದರು - ವರದಾ ನದಿ .
- ತಾಳಗುಂದದ ಪ್ರಾಚೀನ ಹೆಸರು - ಸ್ಥಣ ಕುಂದೂರು
- ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
- ಮಯೂರವರ್ಮನು ವಿಧ್ಯಾಭ್ಯಾಸಕ್ಕಾಗಿ ಹೋದ ವಿದ್ಯಾಕೇಂದ್ರ - ಕಂಚಿ
- ಕದಂಬರ ಈ ದೊರೆಯನ್ನು ಕುಂತಳ ರಾಜ್ಯದ ಏಕಮಾತ್ರ ದೊರೆ ಎಂದು ಹೇಳಲಾಗಿದೆ - ಭಗೀರಥ ವರ್ಮ
- ಗುಪ್ತರೊಂದಿಗೆ ವೈವೈಹಿಕ ಸಂಬಂಧ ಹೊಂದಿದ್ದ ಕದಂಬ ದೊರೆ - ಕಾಕುಸ್ಥ ವರ್ಮ
- ಕದಂಬರ ಕೊನೆಯ ದೊರೆ - ಹರಿವರ್ಮ -
- ಕದಂಬರ ಆಳ್ವಿಕೆಯನ್ನು ಕೊನೆಗಾಣಿಸಿದ ಸಾಮ್ರಾಜ್ಯ - ಬಾದಾಮಿ ಚಾಲುಕ್ಯರು
- ತಾಳಗುಂದ ಶಾಸನವು ಈ ಅರಸರನ್ನು “ ಆಬರಣ ” ಎಂದು ಬಣ್ಣಿಸಿದೆ - ಕಾಕುಸ್ಥ ವರ್ಮ
- ಹಲ್ಮಿಡಿ ಶಾಸನದ ಕಾಲ - ಕ್ರ.ಶ.450
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ